ಬರಲಿದೆ 547 ಕಿ.ಮೀ.ಮೈಲೇಜ್ ನೀಡುವ ನಿಸ್ಸಾನ್ ಎಲೆಕ್ಟ್ರಿಕ್ ಕಾರು

ಮೈಲೇಜ್ ಬಗ್ಗೆ ಚಿಂತೆ ಮಾಡುವ ಭಾರತೀಯರಿಗಿದು ಖುಷಿ ನೀಡುವ ಸುದ್ದಿ. ನಿಸ್ಸಾನ್ ಕಾರು ನಿರ್ಮಾಣ ಕಂಪೆನಿ ಭಾರತದಲ್ಲಿ ತನ್ನ ಹೊಸ ಇಲೆಕ್ಟ್ರಿಕ್ ಕಾರನ್ನು ಭಾರತಕ್ಕೆ ಪರಿಚಯಿಸಲು ಮುಂದಾಗಿದೆ.

ನಿಸ್ಸಾನ್ ಸಂಸ್ಥೆಯು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಸ್ಟ್ ಎಲೆಕ್ಟ್ರಿಕ್ ಕಾರುಗಳ ಮಾರಾಟ ಸಂಸ್ಥೆಯೆಂದೇ ಜನಪ್ರಿಯತೆ ಹೊಂದಿದೆ.  ಸದ್ಯ ಭಾರತದಲ್ಲೂ ತನ್ನ ಯಶಸ್ವಿ ಲೀಫ್ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.

ಹೊಸ ಮಾದರಿ ಕಾರು ಹತ್ತು ಹಲವು ಹೊಸ ಸೌಲಭ್ಯವನ್ನು ಈ ಕಾರು ಈಗಾಗಲೇ ವಿಶ್ವಾದ್ಯಂತ ಲಕ್ಷಾಂತರ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರತಿ ಚಾರ್ಜ್‌ಗೆ 547 ಕಿ.ಮೀ ಮೈಲೇಜ್ ನೀಡುತ್ತೆ ಈ ನಿಸ್ಸಾನ್ ಇವಿ ಕಾರು ಎಂಬುದು ಭಾರತದಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

ಸುಧಾರಿತ ತಂತ್ರಜ್ಞಾನ ಹೊಂದಿರುವ ಲೀಫ್ ಎಲೆಕ್ಟ್ರಿಕ್ ಹ್ಯಾ‌ಚ್‌ಬ್ಯಾಕ್ ಕಾರು ದೇಶಿಯ ಮಾರುಕಟ್ಟೆಗೆ ಲಗ್ಗೆಯಿಟ್ಟಲ್ಲಿ ಹಲವು ಐಷಾರಾಮಿ ಕಾರುಗಳನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಬಹುದು.

ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಬರೋಬ್ಬರಿ 547 ಕಿ.ಮೀ ಮೈಲೇಜ್ ನೀಡಲಿದೆ ಎಂದು ಹೇಳಿಕೊಂಡಿರುವ ನಿಸ್ಸಾನ್ ಸಂಸ್ಥೆಯು, 380 ಕಿಮಿ ಮೈಲೇಜ್ ರೇಂಜ್ ಹೊಂದಿರುವ ಟೆಸ್ಲಾ ಮಾಡೆಲ್ 3 ಕಾರಿಗಿಂತಲೂ ಅತ್ಯತ್ತಮ ಎಲೆಕ್ಟ್ರಿಕ್ ಕಾರು ಮಾದರಿ ಇದಾಗಿದೆ ಎಂದಿದೆ.

ಹೀಗಾಗಿ ಹೊಸ ಕಾರುಗಳ ಮೈಲೇಜ್ ವಿಚಾರವಾಗಿ ಇಡೀ ಆಟೋ ಉದ್ಯಮ ವಲಯವನ್ನೇ ಸೆಳೆದಿರುವ ನಿಸ್ಸಾನ್, ಲೀಫ್ ಎಲೆಕ್ಟ್ರಿಕ್ ಕಾರುಗಳ ಆವೃತ್ತಿ ಮೂಲಕ ಹೊಸ ಯುಗಾರಂಭ ಮಾಡುವುದು ಬಹುತೇಕ ಖಚಿತವಾಗಿದೆ. ಇದಲ್ಲದೇ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳ ಕುರಿತು ಪ್ರಚಾರಕ್ಕಾಗಿ ಎರಡು ಲೀಫ್ ಎಲೆಕ್ಟ್ರಿಕ್ ಕಾರುಗಳನ್ನು ಸಹ ಭಾರತದಲ್ಲಿ ಆಮದು ಮಾಡಿಕೊಳ್ಳಲಾಗಿದ್ದು, ಆಸಕ್ತ ಗ್ರಾಹಕರು ಟೆಸ್ಟ್ ಡ್ರೈವ್ ಮೂಲಕ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ಅನುಭವ ಪಡೆದುಕೊಳ್ಳಬಹುದಾಗಿದೆ.

ಇದಕ್ಕಾಗಿಯೇ ಚೆನ್ನೈ ಬಳಿ 650 ಎಕರೆ ವಿಸ್ತಿರಣದ ಟ್ರ್ಯಾಕ್ ನಿರ್ಮಾಣ ಮಾಡಿರುವ ನಿಸ್ಸಾನ್ ಸಂಸ್ಥೆಯು ಅಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಮತ್ತು ಟೆಸ್ಟ್ ಡ್ರೈವ್ ಕಾರ್ಯವನ್ನು ನಡೆಸಲಿದೆ ಎಂಬ ಮಹತ್ವದ ಮಾಹಿತಿ ಕೂಡಾ ಲಭ್ಯವಾಗಿದೆ.

ವಿಶ್ವದರ್ಜೆ ಸೌಲಭ್ಯಗಳು ಕಾರಿನ ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸಿದ್ದು, ಕಾರಿನ ಹೊರ ಮತ್ತು ಒಳ ವಿನ್ಯಾಸಗಳು ಸಾಕಷ್ಟು ಆಕರ್ಷಣೆಯಿಂದ ಕೂಡಿರುವುದಲ್ಲದೇ ಸ್ಪೋರ್ಟಿ ಲುಕ್ ಸಹ ಪಡೆದುಕೊಂಡಿವೆ.

Be the first to comment

Leave a Reply

Your email address will not be published.


*