ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುವ ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ- ಡಾ.ಎಂ.ಎನ್. ರಾಜೇಂದ್ರ ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುವ ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ ಮತ್ತು ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸವೂ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ, ನಾನು ಆಕಾಂಕ್ಷಿ ಎಂದು ಯಾವುದೇ ಪಕ್ಷಕ್ಕೆ ಅರ್ಜಿ ಹಾಕಿಲ್ಲ. ಆದರೆ ನಾನು ಲೋಕ ಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ಪಕ್ಷದಲ್ಲಿ ಪ್ರಸ್ತಾಪ ಆಗಿದೆ ಎನ್ನುವುದು ನಿಜ. ಒಂದು ವೇಳೆ ಪಕ್ಷದಿಂದ ನನಗೆ ಸ್ಪರ್ಧಿಸುವ ಅವಕಾಶ ನೀಡಿದಲ್ಲಿ ನಾನು ಖಂಡಿತಾ ಸ್ಪರ್ಧಿಸುತ್ತೇನೆ ಮತ್ತು ಈ ಚುನಾವಣೆಯಲ್ಲಿ ಜಯಗಳಿಸುತ್ತೇನೆ. ಸಹಕಾರಿ ಕ್ಷೇತ್ರದ ಜನರು ಹಾಗೂ ಇತರ ಮತದಾರರು ನನ್ನನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*