ಬಂಟ್ವಾಳದಲ್ಲಿ ಕಾಂಗ್ರೇಸ್ ಪದಾಧಿಕಾರಿಗಳ ಸಭೆ

ಬಂಟ್ವಾಳ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳದ ಕಾಂಗ್ರೆಸ್ ಕಛೇರಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ  ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಕಾಂಗ್ರೆಸ್ ಪಕ್ಷದ ಆಡಳಿತದಿಂದಾಗಿ ಸಮಾಜದ ಎಲ್ಲರಿಗೂ ಸಮಾನ ಗೌರವ,ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ಆಡಳಿತದಿಂದಾಗಿ ಎಲ್ಲರಿಗೂ ಸಮಾನ ಹಕ್ಕು ಭೂಮಿ ಒಡೆತನದ ಹಕ್ಕುಗಳನ್ನು ನೀಡಿದೆ ಎಂದು ಸಚಿವ ರಮಾನಾಥ ರೈ ಹೇಳಿದರು.
ಕಾಂಗ್ರೆಸ್ ಸರಕಾರಗಳು ಯಾವದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ನಾವು ಜನರಿಗೆ ತಲುಪಿಸಬೇಕಾಗಿದೆ ಎಂದರು.ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೇಂದು ಹೇಳಿದರು. ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳು ಬ್ಲಾಕ್ ಹಾಗೂ ವಲಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*