ಈ ಬಾರಿ ಕಾಂಗ್ರೆಸ್ ಗೆಲುವು ಖಚಿತಃ ರಮಾನಾಥ ರೈ

ಮಂಗಳೂರುಃ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ಯುವ ಅಭ್ಯರ್ಥಿ ಜಯಗಳಿಸಲಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ರಮಾನಾಥ ರೈ ಅವರು ಹೇಳಿದ್ದಾರೆ.
ನಮ್ಮ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿಜೆಪಿ ಸಂಸದರ ಸಂಪೂರ್ಣ ವೈಫಲ್ಯ ದಿಂದಾಗಿ  ವರದಾನ ಆಗಲಿದೆ. ಈ ಕ್ಷೇತ್ರಕ್ಕೆ ಸಮರ್ಥ ಸಂಸದನ ಅಗತ್ಯ ಇದೆ ಎಂದವರು ಹೇಳಿದರು.

ಸಿದ್ದರಾಮಯ್ಯ ಸರಕಾರ ಮತ್ತು ಅನಂತರ ಈಗಿರುವ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳೂ ಜೊತೆ ಸೇರಿ ಚುನಾವಣೆಯನ್ನು ಎದುರಿಸಲಿದ್ದೇವೆ. ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ,ಜೆಡಿಎಸ್ ಪಕ್ಷದ ಮುಖಂಡರುಗಳು ಈಗಾಗಲೇ ಜಿಲ್ಲೆಯಲ್ಲಿ ಒಂದು ಸುತ್ತು ಸಂಚಾರ ಮಾಡಿದ್ದಾರೆ ಎಂದು ರೈ ಹೇಳಿದರು.
ಈ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ ಎಂದರೆ ಅದು ಕಾಂಗ್ರೆಸ್ ಸರಕಾರದಿಂದ ಆಗಿರುತ್ತದೆ.ಉದಾಹರಣೆಗೆ ಸೀ ಪೋರ್ಟ್ , ಏರ್ಪೋರ್ಟ್,ಎನ್.ಟಿ.ಐ ಟಿಕೆ ಇಂಜಿನಿಯರ್ ಕಾಲೇಜು,ಎಮ್ ಆರ್ ಪಿ ಎಲ್ ,ಒಎನ್ ಜಿ ಸಿ ಬಂದಿವೆ ಎಂದು ಹೇಳಿದರು.

Be the first to comment

Leave a Reply

Your email address will not be published.


*