ಉರಿಬಿಸಿಲು ಲೆಕ್ಕಿಸದೆ ಕೋಟೆ ಪುರದಲ್ಲಿ ಚುನಾವಣಾ ಪ್ರಚಾರಕ್ಕಿಳಿದ ಖಾದರ್

ಲೋಕಸಭಾ ಚುನಾವಣೆಗೆ ಕೆಲವೆ ದಿನಗಳು ಬಾಕಿ ಇದ್ದು ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದಲ್ಲಿ ಹಗಲು ರಾತ್ರಿ ತನ್ನನ್ನು ತಾನು ತೊಡಗಿಸಿಕೊಂಡಿದೆ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಹೇಗಾದರೂ ಮಿಥುನ್ ರೈ ಯವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ.ನಿನ್ನೆ ತಡರಾತ್ರಿಯವರೆಗೆ ಪಕ್ಷದ ಕಾರ್ಯಕ್ರಮದಲ್ಲಿದ್ದ ಸಚಿವರು ಇಂದು ಬೆಳ್ಳಂಬೆಳ್ಳಿಗೆ ಮತ್ತೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.ಉರಿಬಿಸಿಲು ಲೆಕ್ಕಿಸದೆ ಸಚಿವರು ಕೋಟೆ ಪುರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

Be the first to comment

Leave a Reply

Your email address will not be published.


*