ಕರ್ನಾಟಕ ರಾಜ್ಯದ – ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣದ ನಂತರ ಅವರಿಗೆ ರಾಜ್ಯ ಸರ್ಕಾರ- ಸೂಕ್ತ ಭದ್ರತೆಯ – ಉದ್ಯೋಗ ನೀಡುವ ಯೋಜನೆಯನ್ನು ಜಾರಿಗೊಳಿಸಲು ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹ

ವಿಟ್ಲ:- ಕರ್ನಾಟಕ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿಕೊಂಡು ರಾಜ್ಯದಲ್ಲಿ ಉತ್ತಮವಾದ ಅಂಕವನ್ನು ಗಳಿಸಿಕೊಂಡು ಮುನ್ನಡೆಯುತ್ತಿದ್ದಾರೆ
ಇವರ ಶಿಕ್ಷಣ ಪೂರ್ತಿಯಾದ ನಂತರದ ದಿನಗಳಲ್ಲಿ ಇವರ ಶಿಕ್ಷಣದ ಅರ್ಹತೆಗೆ ಅನುಸರವಾಗಿ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ರಾಜ್ಯ ಸರಕಾರ‌ ಸೂಕ್ತ ಭದ್ರತೆಯ ಮೂಲಕ ಉದ್ಯೋಗದ ಹೊಸ ಯೋಜನೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸರಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಆಗ್ರಹಿಸಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶ್ರೇಷ್ಟ ಮಟ್ಟದಲ್ಲಿ ಕಲಿಯುವ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಅವರ ಶಿಕ್ಷಣ ಪೂರ್ಣವಾದರೆ ಅವರು ಮನೆಯಲ್ಲಿ ಧರ್ಮದ ಆಚಾರ ವಿಚಾರಗಳಿಗೆ ಬದ್ದವಾಗಿ ಮನೆಯಲ್ಲಿ ಇರಬೇಕಾಗುತ್ತದೆ ಇಂತಹ ಸಂದರ್ಭದಲ್ಲಿ ಇವರಿಗೆ ಸೂಕ್ತ ಭದ್ರತೆಯ ಮೂಲಕ ರಾಜ್ಯ ಸರಕಾರ ಉದ್ಯೋಗ ಕಲ್ಪಿಸುವ ಪ್ರತ್ಯೇಕ ನಿಯಮವನ್ನು ಜಾರಿಗೆ ತರಲು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು

ಈ ಹಿಂದೆ ಎಲ್ಲಾ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಏಳನೇ ತರಗತಿ ನಂತರ ಶಾಲೆಯನ್ನು ಬೀಡುವ ಕಾಲವೂಂದಿತ್ತು
ಬದಲಾದ ಸನ್ನಿವೇಶದಲ್ಲಿ ಈಗಾಗಲೇ ಸಮುದಾಯದ ವಿದ್ಯಾರ್ಥಿನಿಯರು ಉತ್ತಮ ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆಯನ್ನು ಮಾಡುತ್ತಾರೆ.
ಇಂತಹ ಸಂದರ್ಭಗಳಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ರಾಜ್ಯ ಸರಕಾರ ಪ್ರತ್ಯೇಕ ಭದ್ರತೆಯ ಸೂಕ್ತ ಉದ್ಯೋಗ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ

Be the first to comment

Leave a Reply

Your email address will not be published.


*