ರೈತ ಸೇವಾ ಸಹಕಾರಿ ಸಂಘದ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ಪೂರ್ವಭಾವಿ ಸಭೆ

ಪಾಣೆಮಂಗಳೂರು ರೈತ ಸೇವಾ ಸಹಕಾರಿ ಸಂಘ ಹಾಗೂ ಕಲ್ಲಡ್ಕ ರೈತ ಸೇವಾ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ಪೂರ್ವಭಾವಿ ಸಭೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಚಂದ್ರಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಈ ಚುನಾವಣಾ ಆಯ್ಕೆಯ ಪೂರ್ವಭಾವಿ ಸಭೆಯಲ್ಲಿ ಎರಡು ಸಹಕಾರ ಸಂಘದ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್, ಎ.ಪಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ರೈ, ಪ್ರಮುಖರಾದ ಅಬ್ಬಾಸ್ ಆಲಿ ,ಚಂದ್ರ ಶೇಖರ ಪೂಜಾರಿ ಕೋರ್ಯ, ಚಂದ್ರ ಶೇಖರ ರೈ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ರಾಮಚಂದ್ರ ಪ್ರಭು, ಆಲ್ಬರ್ಟ್ ಮಿನೇಜಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ, ಚಂದ್ರ ಶೇಖರ ಪೂಜಾರಿ, ವಲಯ ಅಧ್ಯಕ್ಷರುಗಳು, ಪಕ್ಷದ ಪರಮುಖರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*