ಭೀಕರ ಅಪಘಾತ ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಎಕ್ಕೂರು ಬಳಿ ಸಂಭವಿಸಿದೆ.ಮೃತ ಸವಾರನನ್ನು ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಸಿದ್ದೀಕ್ ಬೈಕಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ ಇವರಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ

Be the first to comment

Leave a Reply

Your email address will not be published.


*