ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಖಾದರ್ ಭೇಟಿ; ಪರಿಶೀಲನೆ

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು . ಇತ್ತ ಕಡಲ ತೀರದ ಜನ ಆತಂಕದಲ್ಲೇ ಜೀವನ ಸಾಗಿಸುತ್ತಿದ್ದಾರೆ.. ಇನ್ನು ಉಳ್ಳಾಲ ಪುರಸಭಾ ವ್ಯಾಪ್ತಿಯ ಕೈಕೋ ಪ್ರದೇಶದಲ್ಲಿ ಕಡಲ ಅಲೆಗಳ ಅಬ್ಬರ ಜೋರಾಗಿ ಕಡಲ್ಕೊರೆತ ಸಂಭವಿಸಿದ್ದು ಹಲವು ಮನೆಗಳು ಕಡಲು ಪಾಲಾಗಿವೆ.. ಇದೀಗ ಅಲ್ಲಿಯ ಸ್ಥಳೀಯರು ವಾಸಸ್ಥಳವಿಲ್ಲದೆ ಪರದಾಡುತ್ತಿದ್ದು ಇನ್ನುಳಿದವರು ಮುಂದೇನಾಗುತ್ತೆ ಎಂಬ ಭಯದಲ್ಲಿ ಜೀವನ ಸಾಗಿಸುವಂತಾಗಿದೆ .ಈ ನಿಟ್ಟಿನಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿಖಾದರ್ ಸಂಬಂಧ ಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳೊಂದಿಗೆ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

Be the first to comment

Leave a Reply

Your email address will not be published.


*