ವಿದ್ಯಾರ್ಥಿಗಳ ಹಾಸ್ಟೆಲ್ ಮರು ನಿರ್ಮಾಣಕ್ಕೆ ಮುಂದಾದ ಮಾಜಿ ಸಚಿವ ರೈ

ಶಿಥಿಲಾವಸ್ಥೆಗೆ ತಲುಪಿ ಬೀಳುವ ಸ್ಥಿತಿಯಲ್ಲಿರುವ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡಕ್ಕೆ ಮಾಜಿ ಸಚಿವ ರೈ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ ಈ ಹಾಸ್ಟೆಲ್ ನಿರ್ಮಾಣಗೊಂಡಿದ್ದು ಬಾಲಕರು ಇದೀಗ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ ಈ ಹಾಸ್ಟೆಲ್ ಕಳೆದ ಹಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದು ಇದೀಗ ಕುಸಿಯುವ ಸ್ಥಿತಿಯಲ್ಲಿದೆ ಇತ್ತೀಚೆಗೆ ತೀವ್ರ ನಾ ದುರಸ್ತಿಗೆ ತಲುಪಿದ ಕಟ್ಟಡದಲ್ಲಿ ವಿದ್ಯಾರ್ಥಿಗಳ ವಾಸ ಅಪಾಯಕಾರಿ ಅಂತ ಗಮನಿಸಿ ಇಲ್ಲಿನ ವಿದ್ಯಾರ್ಥಿಗಳನ್ನು ಗುರುವಾರ ಮೊಗರ್ನಾಡುವಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು .ಇನ್ನು ಇದಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಭೀಮಾನದಿ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಗುಡ್ಡೆಅಂಗಡಿ ಅವರಿಂದ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಇನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಟ್ಟಡ ನಿರ್ಮಿಸಲು ಸರಕಾರಕ್ಕೆ ತುರ್ತಾಗಿ ರೈ ಪ್ರಸ್ತಾವನೆ ಸಲ್ಲಿಸುವ ಮೂಲಕ ಸ್ಪಂದಿಸುವಂತೆ ಸಲಹೆ ನೀಡಿದ್ದಾರೆ .ಇನ್ನು ಪರಿಶೀಲನೆಯ ವೇಳೆ ಪುರಸಭಾ ಸದಸ್ಯ ಅಬೂಬಕರ್ ಸಿದ್ದಿಕ್ ಗುಡ್ಡೆಅಂಗಡಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಡಿ ಸಜಿಪಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಯೂಸೂಫ್ ಇನ್ನೂ ಹಲವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*