ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಿಸುವಂತೆ ನಳಿನ್ ಕುಮಾರ್ ಕಟೀಲ್ ಆಗ್ರಹ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು.ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.

Be the first to comment

Leave a Reply

Your email address will not be published.


*