ಉಡುಪಿ:ಉದ್ಯಾವರದ ಬಳಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್-ಚಾಲಕ ಪಾರು

ಉಡುಪಿ: ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಬುಧವಾರ ಬೆಳಗ್ಗಿನ ಜಾವ ನಡೆದಿದೆ.

ಉಡುಪಿಯಿಂದ – ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಉಡುಪಿ ಮಂಗಳೂರು ಕಡೆ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳವನ್ನು ಸನ್ನದ್ದವಾಗಿರಿಸಿದೆ.

Be the first to comment

Leave a Reply

Your email address will not be published.


*