ದ.ಕ ಜಿಲ್ಲೆಯಲ್ಲಿ ಭಾರಿ ಮಳೆ; ಮಂಗಳೂರು- ಬೆಂಗಳೂರು ರೈಲು ಸಂಚಾರ ಸ್ಥಗಿತ

ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯ ನೆಟ್ಟಣ ಹಾಗೂ ಸಕಲೇಶಪುರ ಮಾರ್ಗ ಮಧ್ಯೆ ಇರುವ ಸಿರಿಬಾಗಿಲು ಎಂಬಲ್ಲಿ ಹಳಿ ಮೇಲೆ ಗುಡ್ಡ ಕುಸಿತಗೊಂಡಿದೆ .ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ತೊಡಕಾಗಿದ್ದು, ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಈ ಗುಡ್ಡ ಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ. ಇನ್ನು ಈ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಮಂಗಳವಾರ ಅಪರಾಹ್ನ ಹೊರಟಿದ್ದ ಮಂಗಳೂರು-ಬೆಂಗಳೂರು ರೈಲು ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಸ್ಥಗಿತವಾಗಿತ್ತು.ಇನ್ನು ರೈಲ್ವೇ ನಿಲ್ದಾಣದಲ್ಲಿ ವ್ಯವಸ್ಥೆಗಳಿಲ್ಲದೆ ಪ್ರಯಾಣಿಕರು ಪರದಾಟುವಂತಾಗಿತ್ತು. ಒಂದು ಕಡೆ ವಿಪರೀತ ಮಳೆ- ಮತ್ತೊಂದಡೆ ಅರ್ಧದಲ್ಲೇ ನಿಂತ ರೈಲಿನಿಂದಾಗಿ ಪ್ರಯಾಣಿಕರು ತೆರಳಲು ಬಸ್ಸಿನಲ್ಲಿ ತೆರಳಲು ಸರಕಾರಿ ಬಸ್ ಗಳ ವ್ಯವಸ್ಥೆ ಮಾಡದ ರೈಲ್ವೇ ಅಧಿಕಾರಿಗಳ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ.

 

Be the first to comment

Leave a Reply

Your email address will not be published.


*