ವಿಶ್ವ ಜನಸಂಖ್ಯಾ ದಿನಾಚರಣೆಗೆ ಸಾಕ್ಷಿಯಾದ ರವೀಂದ್ರ ಕಲಾಭವನ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿತು. ಕಾರ್ಯಕ್ರಮವನ್ನು ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂಪನ್ಮೂಲಗಳ ಸಂರಕ್ಷಣೆಯೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ಕುಟುಂಬ ಕಲ್ಯಾಣ ಯೋಜನೆ ಅಗತ್ಯವಿದೆ.ದೇಶದಲ್ಲಿ ಆರೋಗ್ಯ ವ್ಯವಸ್ಥೆಯಲ್ಲಿ ಆಗಿರುವ ಸುಧಾರಣೆಯಿಂದ ಶಿಶುಮರಣ ಸಂಖ್ಯೆ ಕಡಿಮೆಯಾಗಿದೆ. ಸಾಕಷ್ಟು ಕಾಯಿಲೆಗಳು ನಮ್ಮಿಂದ ದೂರವಾಗಿದೆ. ಆದ್ರೆ ನಮ್ಮ ನೈಸರ್ಗಿಕ ಸಂಪನ್ಮೂಲ ಗಳಾದ ನೆಲ,ಜಲ, ವಾಯುಮಾಲಿನ್ಯ ಹೆಚ್ಚುತ್ತಿದೆ. ಭವಿಷ್ಯದ ಜನಾಂಗಕ್ಕೆ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿಮಲಿನಗೊಳಿಸದೆ ಸಂರಕ್ಷಿಸಿ ಕೊಡಬೇಕಾದ ಹೊಣೆಗಾರಿಕೆ ಇದೆ ಎಂದು ಅವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಡಾ|ಉದಯಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದರು.ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎಂ.ರಾಮಕೃಷ್ಣ ರಾವ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|ಸಿಕಂದರ ಪಾಷ, ಡಾ.ನವೀನ್ ಕುಮಾರ್ , ಆಳ್ವಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ|ಯೋಗೀಶ್ ಕೈರೋಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*