ಹಜ್ ವಿಮಾನ ಯಾತ್ರೆ ಉದ್ಘಾಟನೆ ನೆರವೇರಿಸಿದ ಯು.ಟಿ.ಖಾದರ್

ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ 2019ನೇ ಸಾಲಿನಲ್ಲಿ ಹೊರಡುವ ಹಜ್ಜಾಜ್‌ಗಳ ವಿಮಾನ ಯಾತ್ರೆಗೆ ಬುಧವಾರ ಬಜ್ಪೆಅನ್ಸಾರ್ ಪಬ್ಲಿಕ್ ಸ್ಕೂಲ್ ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಹಜ್ ನಿರ್ವಹಣಾ ಸಮಿತಿಯ‌ ಅಧ್ಯಕ್ಷ ವೈ. ಮುಹಮ್ಮದ್ ಕುಂಞಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸಭಾ ಕಾರ್ಯಕ್ರಮ ಉದ್ಘಾಟಿಸಿ, ಎಲ್ಲಾ ಯಾತ್ರಿಕರು ದೇಶದ ಒಳಿತು, ಶಾಂತಿ, ಸೌಹಾರ್ದಕ್ಕಾಗಿ ವಿಶೇಷವಾಗಿ‌ ಪ್ರಾರ್ಥಿಸಬೇಕು ಎಂದು ಕರೆ ನೀಡಿದರು. ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ದುಆ ನೆರವೇರಿಸಿದರು. ಮಂಗಳೂರು ಹಜ್ ವಿಮಾನ ಯಾತ್ರೆಯ ಸಭಾ ಕಾರ್ಯಕ್ರಮ‌ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ . ಅಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಪಾಸ್ ಪೋರ್ಟ್ ಹಸ್ತಾಂತರ ಮಾಡಿದರು. ರಾಜ್ಯ ಹಜ್ ಕಮಿಟಿ ಸದಸ್ಯ ಕೆಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಅವರು ಪ್ರಸ್ತಾವನೆಗೈದರು. ವೇದಿಕೆಯಲ್ಲಿ ಕೇಂದ್ರ ಹಜ್ ಸಮಿತಿಯ ಸದಸ್ಯ ಹಾಗೂ ಸಂಸದ ಮುಹಮ್ಮದ್ ಇರ್ಫಾನ್ ಅಹ್ಮದ್, ಮಾಜಿ ಶಾಸಕರಾದ ಕೆ.ಎಸ್. ಮುಹಮ್ಮದ್ ಮಸೂದ್, ಬಿ.ಎ.ಮೊಯ್ದಿನ್ ಬಾವ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು‌ ಮೋನು, ಮಾಜಿ ಅಧ್ಯಕ್ಷ ಎಸ್ ಎಂ ರಶೀದ್ ಹಾಜಿ, ಅಬ್ದುರ್ರಶೀದ್ ಝೈನಿ, ಬಜ್ಪೆ ಅನ್ಸಾರ್ ಸ್ಕೂಲ್ ಅಧ್ಯಕ್ಷ ಬಿ.ಎಂ. ಝಕರಿಯಾ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ‌ಮೋನು, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್, ಹೈದರ್ ಪರ್ತಿಪ್ಪಾಡಿ, ಕೆ.ಕೆ. ಶಾಹುಲ್ ಹಮೀದ್, ಎನ್ ಎಸ್ ಕರೀಂ, ಮಾಜಿ ಮೇಯರ್ ಕೆ. ಅಶ್ರಫ್, ಬಶೀರ್ ಬೈಕಂಪಾಡಿ, ಬಜ್ಪೆ ಗ್ರಾಪಂ ಸದಸ್ಯ ಸಿರಾಜ್, ಶರೀಫ್ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಹಜ್ ಕಮಿಟಿಯ ಇಒ ಸರ್ಫ್ರಾಝ್ ಖಾನ್ ಸರ್ದಾರ್ ಸ್ವಾಗತಿಸಿದರು.ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿಎಂ ಮುಮ್ತಾಝ್ ಅಲಿ ಕೃಷ್ಣಾಪುರ ವಂದಿಸಿ, ಸಮಿತಿಯ ಮಾಧ್ಯಮ ಕಾರ್ಯದರ್ಶಿ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Be the first to comment

Leave a Reply

Your email address will not be published.


*