ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು

ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ೭೫ರ ಬ್ರಹ್ಮರಕೂಟ್ಲು ಸುಂಕ ವಸೂಲಿ ಕೇಂದ್ರದ ಬಳಿ ಕಾರು ಮತ್ತು ಟ್ಯಾಂಕರ್ ನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ,ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ ಇನ್ನು  ಕಾರಿನಲ್ಲಿ ಎಷ್ಟು ಜನ ಇದ್ದಾರೆ ಎಂಬ ನಿಖರ ಮಾಹಿತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರು ಕಡೆಯಿಂದ ಬರ್ತಾ ಇದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಭೀಕರ ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ

Be the first to comment

Leave a Reply

Your email address will not be published.


*