ನೆರೆಪೀಡಿತ ಉಳಿಯ ಪ್ರದೇಶಕ್ಕೆ ಭೇಟಿ ನೀಡಿದ ಮಾಜಿ ಸಚಿವ ;ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಡೀ ಕರ್ನಾಟಕ ಜಲಾವೃತಗೊಂಡಿದೆ .ಒಂದೆಡೆ ಉತ್ತರ ಕರ್ನಾಟಕ ಪ್ರವಾಹಕ್ಕೆ ತುತ್ತಾಗಿದ್ದು ಜನರ ಸ್ಥಿತಿ ಚಿಂತಾಜನಕ ಗೊಂಡಿದೆ .ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಗೂ ಪ್ರವಾಹ ಅಪ್ಪಳಿಸಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ .ಬಂಟ್ವಾಳ ಬೆಳ್ತಂಗಡಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಲಪ್ರಳಯ ಉಂಟಾಗಿದ್ದು ಇತ್ತ ಉಳ್ಳಾಲದ ಕೆಲವು ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿದೆ.ಈ ನಿಟ್ಟಿನಲ್ಲಿ ಪ್ರವಾಹ ಪೀಡಿತ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳಿಯ ಪ್ರದೇಶಸಂಪೂರ್ಣವಾಗಿ ಪ್ರವಾಹಕ್ಕೆ ಒಳಗಾಗಿದ್ದು ಈ ಪ್ರದೇಶಕ್ಕೆ ಉಳ್ಳಾಲ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ .ಜೊತೆಗೆ ಅಲ್ಲಿಯ ನಿವಾಸಿಗಳಿಗೆ ಪರಿಹಾರದ ಭರವಸೆಯನ್ನು ನೀಡುವುದರ ಮೂಲಕ ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಿದ್ದಾರೆ .

Be the first to comment

Leave a Reply

Your email address will not be published.


*