ಗುಡ್ಡ ಕುಸಿದು ಮನೆಗೆ ಹಾನಿ, ಪರಿಶೀಲನೆ ನಡೆಸಿದ ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ – ನೆರೆ ಹಾವಳಿಯಲ್ಲಿ ಉಂಟಾದ ನಷ್ಟದ ಪ್ರಮಾಣವನ್ನು ಗುರುತಿಸಿ ವರದಿ ಸಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ಸಮಿತಿಯು ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ.ಬಿ ರಮಾನಾಥ ರೈಯವರ ಅಧ್ಯಕ್ಷತೆಯಲ್ಲಿ ತಮಡವನ್ನು ರಚಿಸಿ ಇಂದು ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮಕ್ಕೆ ಮಾಜಿ ಸಚಿವ ರೈ ಭೇಟಿ ನೀಡಿದ್ದು; ಮಳೆಯಿಂದಾಗಿ ಗುಡ್ಡ ಜರಿದು ಹಾನಿಗೀಡಾದ ಸ್ಥಳವನ್ನು ಪರಿಶೀಲಿಸಿದ್ದಾರೆ..ಇನ್ನು ಕರಿಯಂಗಳ ಗ್ರಾಮದ ಪಲ್ಲಿಪಾಡಿ ನಿವಾಸಿ ಪೂವಪ್ಪ ಪೂಜಾರಿಯರವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು , ಮನೆ ಸಂಪೂರ್ಣ ಹಾನಿಯಾಗಿದೆ. ಇನ್ನು ಈ ಸಂದರ್ಭದಲ್ಲಿ
ಉಮೇಶ್ ಕರಿಯಂಗಳ, ಚಂದ್ರಹಾಸ ಪಲ್ಲಿಪಾಡಿ, ಮೊದಲಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*