ಡಿಕೆಶಿ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ;ರಾಜ್ಯದ ನಾನಾ ಕಡೆಗಳಿಂದ ಸಾವಿರಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಭಾಗಿ

ರಾಜಕೀಯ ಚಾಣಾಕ್ಷ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಬಂಧನಕ್ಕೆ ಒಳಗಾಗಿದ್ದು ಬಂಧನವನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ .ಡಿಕೆ ಶಿವಕುಮಾರ್ ಅಭಿಮಾನಿಗಳು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕನಕಪುರ ಶಾಸಕ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಬಂಧನವನ್ನು ವಿರೋಧಿಸಿ ಕೇಂದ್ರ ಸರಕಾರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ .ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ಮೆರವಣಿಗೆ ಆರಂಭಗೊಂಡಿದ್ದು ಬಿಜೆಪಿ ನಾಯಕರ ವಿರುದ್ಧ ಘೋಷಣೆಯನ್ನು ಕೂಗೋದ್ರಾ ಮೂಲಕ ಮೆರವಣಿಗೆ ಸಾಗುತ್ತಿದೆ .ಇನ್ನು ಈ ಬೃಹತ್ ರ್ಯಾಲಿಯಲ್ಲಿ ರಾಮನಗರ ಚನ್ನಪಟ್ಟಣ ಮೈಸೂರು ಕನಕಪುರ ಹಾಸನ ಬಿಜಾಪುರ ಸೇರಿದಂತೆ ಹಲವು ಕಡೆಗಳಿಂದ ಜನರು ಆಗಮಿಸಿದ್ದು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನ ಜಮಾಯಿಸಿದ್ದಾರೆ.

 

Be the first to comment

Leave a Reply

Your email address will not be published.


*