ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊರ್ವ ಸಾವು

ಇಂದು ಬೆಳ್ಳಂಬೆಳಗ್ಗೆ ಯಮರಾಯ ಅಟ್ಟಹಾಸ ಮೆರೆದಿದ್ದಾನೆ. ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ದಿ| ಸಂಜೀವ ಗೌಡ ಎಂಬವರ ಪುತ್ರ ಗಣೇಶ್ ಗೌಡ(೩೬) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದು, ಗಣೇಶ್ ಇಂದು ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

 

Be the first to comment

Leave a Reply

Your email address will not be published.


*