ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡ ತೆರವು

ಬಂಟ್ವಾಳ ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ.ಪೊಲೀಸ್ ಬಂದೋಬಸ್ತ್‌ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.ಇನ್ನು ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಡಿ.ಟಿ.ನಾಗರಾಜ್, ಪಿಎಸ್‌ಐ ಚಂದ್ರಶೇಖರ್ ಬಂದೋಬಸ್ತ್ ಒದಗಿಸಿದ್ದರು.

Be the first to comment

Leave a Reply

Your email address will not be published.


*