ಅನರ್ಹ ಶಾಸಕ ಎಂಟಿಬಿ ನಾಗರಾಜ್‌ಗೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್ ನಾಯಕರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ ಪಕ್ಷಕ್ಕೆ ಮೋಸ ಮಾಡಿದ್ದು ಮಾಜಿ ಸಿ.ಎಂ ಮನವೊಳಿಕೆ ಬಳಿಕವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು .. ಇದರ ಬಿಸಿ ಇನ್ನೂ ಹಾಗೆ ಇದ್ದೂ , ಇದೀಗ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್‌ರವರನ್ನು ಸೋಲಿಸಲು ಎಲ್ಲಾ ರೀತಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ನಡೆಸುತ್ತಿದೆ. ರೋಲ್ಸ್ ರಾಯ್ಸ್ ಮಾಲೀಕ, ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಎರಡು ದಿವಸಗಳ ಹಿಮದೆ ನನ್ನ ಎದೆಯಲ್ಲಿ ಈಗ ಸಿದ್ದರಾಮಯ್ಯ ಇಲ್ಲ ಅವರನ್ನು ಪಕ್ಕಕ್ಕೆ ಇಟ್ಟಿದ್ದೇನೆ. ನನ್ನ ಎದೆಯಲ್ಲಿ ಕ್ಷೇತ್ರದ ಮತದಾರರು ಇದ್ದಾರೆ” ಎಂದು ಹೇಳಿಕೆ ನೀಡಿದ್ದು ಪಕ್ಷದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇನ್ನು ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸೋಲಿಸಲು ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದು, ಅದಕ್ಕಾಗಿ ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಆನಿಟ್ಟಿನಲ್ಲಿ . ಸೆ.೨೧ರಂದು ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ಸಿಗಲಿದೆ. ಅಂದಹಾಗೆ ’ಶಾಸಕ ಸೇಲಾದ’ ಹೆಸರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಎಂಟಿಬಿ ನಾಗರಾಜ್ ಸೋಲಿಗೆ ಮುನ್ನುಡಿ ಬರೆಯಲಾಗುತ್ತದೆ.

Be the first to comment

Leave a Reply

Your email address will not be published.


*