ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ- ಸಭೆ

ಅತೀವ ಮಳೆಯಿಂದಾಗಿ ದ.ಕ ಜಿಲ್ಲೆಯ ಹೆಚ್ಚಿನ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು , ಪ್ರಯಾಣಿಕರು ರಾಜಕಾರಣಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ . ಗುಂಡಿ – ಹಳ್ಳಗಳು ಜಾಸ್ತಿಯಾದ್ರೂ ಸರ್ಕಾರ ಮಾತ್ರ ಇತ್ತ ಕಡೆ ತಲೆ ಹಾಕುತ್ತಿಲ್ಲ . ಅದರಲ್ಲೂ ಮಂಗಳೂರು – ಸುರತ್ಕಲ್ ರಾಷ್ಟೀಯ ಹೆದ್ದಾರಿ ’ ೬೬’ ಸಂಪೂರ್ಣವಾಗಿ ಹದಗೆಟ್ಟಿದ್ದು, ಪ್ರಯಾಣಿಸದ ಪರಿಸ್ಥಿತಿಯಲ್ಲಿದೆ. ಇನ್ನು ಈ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸಬೇಕೇಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಸೋಮವಾರ ಬ್ರಹತ್ ಪ್ರತಿಭಟನೆ ನಡೆಯಿತು. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು .ಅಂದಹಾಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಎ.ಮೊಹಿದ್ದೀನ್ ಬಾವಾರವರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದ್ದು; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ದವಾಗಿ ಹೊನ್ನಕಟ್ಟೆ ಜಂಕ್ಷನ್‌ನಿಂದ ಬೈಕಂಪಾಡಿ ಜಂಕ್ಷನ್ ವರೆಗೆ ಪಾದಯಾತ್ರೆ ನಡೆಸಿದ್ದಾರೆ . ಬಳಿಕ ಬೈಕಂಪಾಡಿಯಲ್ಲಿ ಪ್ರತಿಭಟನಾ ಸಭೆ ಕೂಡ ಜರುಗಿದೆ. ಇನ್ನು ಈ ಬೃಹತ್ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿದಿನ್ ಬಾವ , ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ ಸೋಜಾ,ಬ್ಲಾಕ್ ಅಧ್ಯಕ್ಷರಾದ ಸದಾಶಿವ ಶೆಟ್ಟಿ ,ಕೇಶವ ಸನೀಲ್, ಮಾಜಿ ಮೇಯರ್‌ಗಳಾದ ಶಶಿಧರ ಹೆಗಡೆ, ಗುಲ್ಜಾರ್ ಬಾನು, ಮಾಜಿ ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ, ಹಾರಿಸ್ ಬೈಕಂಪಾಡಿ ,ಸುಹೈಲ್ ಕಂದಕ್, ಹಿದಾಯತ್ ಕೃಷ್ಣಾಪುರ, ರಾಜೇಶ್ ಕುಲಾಯಿ, ಅನಿಲ್, ಅಬ್ದುಲ್ ಜಲೀಲ್, ಹೇಮಂತ್ ಕುಮಾರ್, ಆನಂದ ಅಮೀನ್, ಸೇರಿದಂತೆ ಅನೇಕ ಕಾಂಗ್ರೇಸ್ ಪಕ್ಷದ ನಾಯಕರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*