ಉದ್ಘಾಟನೆಗೊಂಡ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಚೆಸ್ ಚಾಂಪಿಯನ್ ಶಿಪ್ ೨೦೧೯-೨೦

ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಉಡುಪಿ ವತಿಯಿಂದ ಆಯೋಜಿಸಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಚೆಸ್ ಚಾಂಪಿಯನ್ ಶಿಪ್ ೨೦೧೯-೨೦ ಪಂದ್ಯಾವಳಿ ಶುಕ್ರವಾರ ಜರುಗಿದೆ. ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಉಡುಪಿ ವತಿಯಿಂದ ಕಾರ್ಯಕ್ರಮ ಜರುಗಿದ್ದು, ಮಾನ್ಯ ಮುಜರಾಯಿ ಮೀನುಗಾರಿಕಾ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದು , ಎಲ್ಲಾ ಕ್ರೀಡಾಪಟುಗಳಿಗೆ ಶುಭಹಾರೈಸಿದ್ದಾರೆ . ಅಂದಹಾಗೆ ಈ ಉದ್ಘಾಟನಾ ಸಮಾರಂಭದಲ್ಲ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಭಾಗವಹಿಸಿದ್ದು , ದೀಪ ಬೆಳಗಿಸೋದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ . ಮಾತ್ರವಲ್ಲ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಚೆಸ್ ಚಾಂಪಿಯನ್ ಶಿಪ್ ೨೦೧೯-೨೦ರ ಬಗ್ಗೆ ಎಲ್ಲಾ ಪಟುಗಳಿಗೆ ಆಶೀರ್ವಚನವನ್ನು ನೀಡಿದ್ದಾರೆ . ಇನ್ನು ಉಳಿದಂತೆ ಕಾರ್ಯಕ್ರಮದಲ್ಲಿ ಉಡುಪಿ ದಕ್ಷಿಣಕನ್ನಡ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ,ಡಾ ಜಿ.ಎಸ್ ಚಂದ್ರಶೇಖರ್ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*