ಹೇಳಿಕೆ ಕೊಟ್ಟ ತಕ್ಷಣ ಸೂಲಿಬೆಲೆ ದೇಶದ್ರೋಹಿ ಆಗಲ್ಲ: ಸಚಿವ ಸದಾನಂದರ ಮಾತಿಗೆ ಪೇಜಾವರ ಶ್ರೀ ಪ್ರತಿಕ್ರಿಯೆ – ಎನ್.ಎಂ.ಸಿ ನ್ಯೂಸ್

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಗೆ ದೇಶದ್ರೋಹಿ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡರು ವೈಯಕ್ತಿವಾಗಿ ಹೆಸರು ಹೇಳಿ ಹಾಗೆ ಮಾತನಾಡಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಸೂಲಿಬೆಲೆಯವರ ಪರ ಬ್ಯಾಟ್ ಬೀಸಿದ್ದಾರೆ.

ಕೇಂದ್ರದಿಂದ ನೆರೆ ಪರಿಹಾರ ವಿಳಂಬ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀಗಳು, ಹಣ ಬಿಡುಗಡೆ ಆಗದಿರುವುದು ನಮಗೂ ಕೂಡ ಆತಂಕವಾಗಿದೆ. ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ತಿಳಿದಿಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವುದಾಗಿ ಶ್ರೀಗಳು ಹೇಳಿದ್ದಾರೆ.

Be the first to comment

Leave a Reply

Your email address will not be published.


*