ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ : ‘ಅಂತಿಮ’ ಘೋಷಣೆಯೊಂದೇ ಬಾಕಿ – ಎನ್.ಎಂ.ಸಿ ನ್ಯೂಸ್

ಬೆಂಗಳೂರು: ಪ್ರತಿಪಕ್ಷ ನಾಯಕ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು ಪಕ್ಷ ಸಂಘಟನೆ ದೃಷ್ಟಿಯಿಂದ ಹಾಗೂ ವಿಧಾನಸಭೆಯಲ್ಲಿ ಅಡಳಿತ ಪಕ್ಷಕ್ಕೆ ಬಿಸಿ ಮುಟ್ಟುವ ಸಲುವಾಗಿ ಮತ್ತೆ ಸಿದ್ದರಾಮಯ್ಯ ಅವರನ್ನೇ ಪ್ರತಿ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡುವುದಕ್ಕೆ ಹೈಕಮಾಂಡ್ ಮನಸ್ಸು ಮಾಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದು ಬಾಕಿ ಇದೆ ಎನ್ನಲಾಗಿದೆ. ಈಗಾಗಲೇ ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಹಿರಿಯ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿದರು, ಕೆಲವು ಮಂದಿ ಸಿದ್ದರಾಮಯ್ಯರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದರು, ಇನ್ನು ಕೆಲವು ಮಂದಿ ಸಿದ್ದರಾಮಯ್ಯರ ಪರ ಬ್ಯಾಟ್ ಬೀಸಿದ್ದು, ಸಿದ್ದರಾಮಯ್ಯ ಅವರು ಹೇಗಾದರೂ ಪ್ರತಿ ಪಕ್ಷದ ನಾಯಕನಾಗಿ ಕಾಣಿಸಿಕೊಳ್ಳುವುದಕ್ಕೆ ಎಲ್ಲಾ ರೀತಿಯ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್, ಡಾ. ಜಿ.ಪರಮೇಶ್ವರ್, ರಮೇಶ್ ಕುಮಾರ್, ಕೆ.ಹೆಚ್.ಮುನಿಯಪ್ಪ ಸೇರಿ ಹಲವರು ಮಿಸ್ತ್ರಿ ಮುಂದೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಅಂತಿಮ ವರದಿಯನ್ನು ಮಿಸ್ತ್ರಿ ಕೈ ಹೈಕಮಾಂಡ್‍ಗೆ ಸಲ್ಲಿಸಲಿದ್ದಾರೆ. ಹೆಚ್.ಕೆ.ಪಾಟೀಲ್ ಮತ್ತು ಸಿದ್ದರಾಮಯ್ಯ ಮಧ್ಯೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ನಡುವೆ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡದಂತೆ ತೀವ್ರ ವಿರೋಧ ವ್ಯಕ್ತವಾಯಿತು. ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.

Be the first to comment

Leave a Reply

Your email address will not be published.


*