ಶ್ರೀನಿವಾಸ ಪೂಜಾರಿಯವರ ನೂತನ ಕಚೇರಿ ಉದ್ಘಾಟನೆ; ವೇದವ್ಯಾಸ್ ಕಾಮತ್‍ರಿಂದ ಶುಭಹಾರೈಕೆ -ಎನ್.ಎಂ.ಸಿ ನ್ಯೂಸ್

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ನೂತನ ಕಚೇರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ದ.ಕ ಲೋಕಸಭಾ ಸದಸ್ಯ ನಳೀನ್ ಕುಮಾರ್ ಕಟೀಲು ಅವರು ಕೋಟಾರವರು ಹಲವಾರು ವರ್ಷಗಳ ಅನುಭವಿ ರಾಜಕಾರಣಿಯಾಗಿದ್ದು, ಅವರಿಂದ ಜಿಲ್ಲೆಯು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಾತನಾಡಿ ಪ್ರತಿ ಸೋಮವಾರದಂದು ದಿನವಿಡಿ ತಾನು ಈ ಕಚೇರಿಯಲ್ಲಿ ಲಭ್ಯವಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜೆ.ಕೃಷ್ಣ ಪಾಲೇಮಾರ್ ಮೊದಲಾದವರು ಉಪಸ್ಥಿತರಿದ್ದರು. ಅಂತೆಯೇ ಈ ಕಛೇರಿಗೆ ಶಾಸಕರಾದ ವೇದವ್ಯಾಸ್ ಕಾಮತ್ ಭೇಟಿ ನೀಡಿದರು.

 

Be the first to comment

Leave a Reply

Your email address will not be published.


*