ನೆಲ್ಯಾಡಿಯಲ್ಲಿ 22 ಗೋವುಗಳ ಅಕ್ರಮ ಸಾಗಾಟ; ಓರ್ವನ ಬಂಧನ – ಎನ್.ಎಂ.ಸಿ ನ್ಯೂಸ್

ನೆಲ್ಯಾಡಿ: ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೊಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆದು 22 ಜಾನುವಾರುಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.

ತುಮಕೂರು ನಿವಾಸಿ ನವಾಝ್ ಬಂಧಿತ ಆರೋಪಿ. ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಪೊಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಕೋಲ್ಪೆಯಲ್ಲಿ ವಾಹನವನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ತಪಾಸಣೆ ನಡೆಸಿದಾಗ 22 ಜಾನುವಾರುಗಳನ್ನು ಸಾಗಿಸುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*