ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ; ಬಿರುಸಿನ ಮತದಾನ – ಎನ್.ಎಂ.ಸಿ ನ್ಯೂಸ್

ಕಾಸರಗೋಡು, :ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.ಬೆಳಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಸರತಿ ಸಾಲು ಕಂಡುಬರುತ್ತಿದೆ. ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ ಪಕ್ಷದಿಂದ ರವೀಶ್ ತಂತ್ರಿ, ಎಲ್‍ಡಿಎಫ್ ಅಭ್ಯರ್ಥಿ ಎಂ.ಶಂಕರ ರೈ ಮತ್ತು ಯು ಟಿ ಎಫ್ ಅಭ್ಯರ್ಥಿ ಕಮರುದ್ದೀನ್ ನಡುವೆ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.

2,14,799 ಮತದಾರರನ್ನು ಹೊಂದಿರುವ ಮಂಜೇಶ್ವರದಲ್ಲಿ ಕ್ಷೇತ್ರದಲ್ಲಿ 198 ಮತಗಟ್ಟೆಗಳಲ್ಲಿ ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದ್ದು, ಸಂಜೆ ಆರರ ತನಕ ನಡೆಯಲಿದೆ.20 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲ 198 ಮತಗಟ್ಟೆಗಳಲ್ಲಿ ಮತದಾರರ ವೀಡಿಯೋ ರೆಕಾಡಿರ್ಂಗ್ ನಡೆಸಲಾಗುತ್ತಿದೆ.ಒಟ್ಟು ಏಳು ಮಂದಿಯ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

Be the first to comment

Leave a Reply

Your email address will not be published.


*