ಅನರ್ಹ ಶಾಸಕರಿಗೆ ನಿರಾಸೆ : ನಾಳೆ ಸುಪ್ರೀಂನಲ್ಲಿ ವಿಚಾರಣೆ ಇಲ್ಲ – ಎನ್.ಎಂ.ಸಿ ನ್ಯೂಸ್

ನವದೆಹಲಿ : ಅನರ್ಹ ಶಾಸಕರಿಗೆ ಮತ್ತೆ ನಿರಾಸೆಯಾಗಿದ್ದು, ಹಿಂದಿನ ಸ್ಪೀಕರ್ ರಮೇಶ್ ಕುಮಾರ್ 17 ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಪ್ರಶ್ನಿಸಿ ಅನರ್ಹ ಶಾಸಕರನ್ನು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ.

ಹೌದು, ಸುಪ್ರೀಂಕೋರ್ಟ್ ನಲ್ಲಿ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಒಂದು ವಾರ ವಿಚಾರಣೆ ಮುಂದೂಡಲು ಮನವಿ ಮಾಡಿದ್ದರು. ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಆದರೆ. ಒಂದೂ ವಾರದ ಬದಲಾಗಿ 1 ದಿನ ವಿಚಾರಣೆಯನ್ನೂ ಮುಂದೂಡಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಅನರ್ಹ ಶಾಸಕರ ವಿಚಾರಣೆ ಅಕ್ಟೋಬರ್ 23 ಕ್ಕೆ ನಡೆಯಲಿದೆ.

ಕಳೆದ ಬಾರಿಯ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಇಂದು ನಡೆಯಬೇಕಿದ್ದ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿತ್ತು. ಬಳಿಕ ಡಿಸೆಂಬರ್ ನಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದ್ದು, ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.

Be the first to comment

Leave a Reply

Your email address will not be published.


*