ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿ.ಸಿ.ರೋಡ್ ನಗರ ಸೌಂದರ್ಯ ಯೋಜನಾ ವರದಿಯ ಸಭೆ – ಎನ್.ಎಂ.ಸಿ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಸೌಂದರ್ಯ ಯೋಜನೆಯ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಯೋಜನಾ ವರದಿಯ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಸದಸ್ಯರಾದ ತುಂಗಪ್ಪ ಬಂಗೇರ, ಕಮಾಲಾಕ್ಷಿ ಕೆ. ಪೂಜಾರಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಸ್ಪಿ ಲಕ್ಮೀಪ್ರಸಾದ್, ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಜಿಪಂ ಸಿ.ಒ. ಡಾ.ಆರ್ ಸೆಲ್ವಮಣಿ, ಎನ್.ಎಚ್.ಎ.ಐ.ನ ಪ್ರಾಜೆಕ್ಟ್ ಡೈರೆಕ್ಟರ್ ಶಿಶುಮೋಹನ್, ತಹಶೀಲ್ದಾರ್ ರಶ್ಮಿ ಎಸ್.ಆರ್., ಯೋಜನೆಯ ವಿನ್ಯಾಸಕಾರ ಧರ್ಮರಾಜ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಡಾ.ಪ್ರಶಾಂತ್ ಮಾರ್ಲ, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ತಾ.ಪಂ. ಇ.ಒ.ರಾಜಣ್ಣ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಕುಮಾರ್, ಉದಯಕುಮಾರ್, ದೇವದಾಸ್ ಶೆಟ್ಟಿ, ಹಾಗೂ ಎನ್.ಎಂಪಿ.ಟಿ., ಎಂ.ಆರ್.ಪಿ.ಎಲ್., ಒ.ಎನ್.ಜಿ.ಸಿ., ಎಚ್.ಪಿ., ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಂಪೆನಿಯ ಪ್ರಮುಖರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*