
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ ಎಂದು ಎಂ.ಎಸ್. ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. 2001 ರಿಂದ 2006 ರವರೆಗೆ ಕರ್ನಾಟಕ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
ಕರ್ನಾಟಕ ರಾಜ್ಯದ ಮೊದಲ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.
Be the first to comment