ಪಠ್ಯ ಕ್ರಮದಿಂದ ಟಿಪ್ಪು ವಿಚಾರ ತೆಗೆದುಹಾಕುತ್ತೇವೆ: ಯಡಿಯೂರಪ್ಪ ನಿರ್ಧಾರ – ಎನ್.ಎಂ.ಸಿ ನ್ಯೂಸ್

ಬೆಂಗಳೂರು : ಟಿಪ್ಪು ಸುಲ್ತಾನ್ ವಿಚಾರವನ್ನು ಪಠ್ಯ ಪುಸ್ತಕದಿಂದ ತೆಗೆಯುತ್ತೇವೆ ಟಿಪ್ಪು ಸುಲ್ತಾನ್ ಇತಿಹಾಸ ಪುಸ್ತಕದಲ್ಲಿ ಇರಬಾರದು ಎಂದು ಬಿ.ಎಸ್. ಯಡಿಯೂರಪ್ಪ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇತಿಹಾಸ ಪಠ್ಯಕ್ರಮಗಳಿಂದ ಟಿಪ್ಪು ಸುಲ್ತಾನ್ ವಿಷಯವನ್ನು ಅಳಿಸುವಂತೆ ಮಡಿಕೇರಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಚಿವ ಸುರೇಶ್ ಕುಮಾರ್‍ಗೆ ಕಳೆದ ಒಂದು ವಾರದ ಹಿಂದೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಬಳಿಕ ಟಿಪ್ಪು ಸುಲ್ತಾನ್ ಹೆಸರನ್ನು ಇತಿಹಾಸ ಪಠ್ಯಕ್ರಮದಿಂದ ಕೈಬಿಡುವ ಸಂಬಂಧ ಮೂರು ದಿನಗಳೊಳಗೆ ಸಭೆ ನಡೆಸಿ ವರದಿ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪಠ್ಯ ಪುಸ್ತಕ ಸಮಿತಿಗೆ ಸೂಚನೆ ನೀಡಿದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಪಠ್ಯ ಪುಸ್ತಕದಲ್ಲಿ ಟಿಪ್ಪು ವಿಚಾರವನ್ನು ತೆಗೆಯುತ್ತೇವೆ ಎಂದು ಹೇಳಿದ್ದಾರೆ.

Be the first to comment

Leave a Reply

Your email address will not be published.


*