ರಾಮಜನ್ಮಭೂಮಿ ವಿವಾದದ ತೀರ್ಪು: ಅಯೋಧ್ಯೆಯಲ್ಲಿ ಹೈ ಅಲರ್ಟ್ ಘೋಷಣೆ

ರಾಮಜನ್ಮಭೂಮಿ – ಬಾಬರಿ ಮಸೀದಿ ಕಟ್ಟಡ ಕುರಿತ ವಿವಾದದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಂಡಿದ್ದು ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ನವೆಂಬರ್ ೧೭ರಂದು ನಿವೃತ್ತರಾಗಲಿದ್ದು, ಅಷ್ಟರೊಳಗಾಗಿ ತೀರ್ಪು ಹೊರಬೀಳಲಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಅಲರ್ಟ್ ಘೋಷಣೆಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಅಗತ್ಯಬಿದ್ದರೆ ದುಷ್ಕೃತ್ಯದಲ್ಲಿ ತೊಡಗುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ. ಸಿಂಗ್ ಎಚ್ಚರಿಸಿದ್ದಾರೆ.

ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಲಾಗಿದ್ದು, ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಚೋದನಾಕಾರಿ ಚರ್ಚೆ ಆಯೋಜಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

Be the first to comment

Leave a Reply

Your email address will not be published.


*