ಮನಪಾ ಚುನಾವಣೆ; ಕಾಂಗ್ರೆಸ್‌ನ ಅಭ್ಯರ್ಥಿ ಆಯ್ಕೆಯೇ ತಪ್ಪು; ಹಿರಿಯ ಮುಖಂಡ ಜನಾರ್ಧನ ಪೂಜಾರಿ ಕಿಡಿ – ಎನ್.ಎಂ.ಸಿ ನ್ಯೂಸ್

ಮಂಗಳೂರು ಮಹಾ ನಗರ ಪಾಲಿಕೆಯ ಚುನಾವಣೆ ಹತ್ತಿರ ಬರುತ್ತಿದ್ದು ಕೈ ಕೂಟದಲ್ಲಿ ಭಿನ್ನಾಭಿಪ್ರಾಯಗಳೇ ಭುಗಿಳೇಲುತ್ತಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಜನಾರ್ಧನ ಪುಜಾರಿ ಅವರ ಬೆಂಬಲದೊ0ದಿಗೆ ಎಲ್ಲಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂಬ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಪ್ರತ್ಯುತ್ತರ ನೀಡಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬ0ಧಿಸಿ ತನ್ನ ಸಲಹೆ ಸೂಚನೆ ಪಡೆದಿದ್ದೇವೆ ಎಂಬ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಸತ್ಯಕ್ಕೆ ದೂರವಾದುದು. ತಮ್ಮ ಹೇಳಿಕೆಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಇಂದು ಸಂಜೆಯೊಳಗೆ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಅಂತೆಯೇ ಬಿಜೆಪಿ ಆಡಳಿತಕ್ಕೆ ಬರಬೇಕೆಂದು ಕಾಂಗ್ರೆಸ್ ಮಾಡುತ್ತಿದೆ. ಮುಸ್ಲಿಂ ಮಹಿಳೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ. ಪಕ್ಷದ ಟಿಕೆಟ್ ಆಯ್ಕೆಯೇ ತಪ್ಪು. ಮೊಗವೀರ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.

Be the first to comment

Leave a Reply

Your email address will not be published.


*