ಮಂಗಳೂರು; ಆಯುಕ್ತ ಡಾ. ಪಿ ಎಸ್ ಹರ್ಷ ನೇತೃತ್ವದಲ್ಲಿ ಶಾಂತಿ ಸಭೆ – ಎನ್.ಎಂ.ಸಿ ನ್ಯೂಸ್

ಕಡಲ ನಗರಿ ಮಂಗಳೂರಲ್ಲಿ ದಿನದಿಂದ ದಿನಕ್ಕೆ ಮಾದಕ ವಸ್ತು, ಡ್ರಗ್ಸ್ ಜಾಲ ಹೆಚ್ಚಾಗುತ್ತಿದ್ದು ದಿನಕ್ಕೊಂದರ0ತೆ ಪ್ರಕರಣಗಳ ಪತ್ತೆಯಾಗುತ್ತಿದೆ. ನೆರೆಯ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುವ ಜಾಲ ಪತ್ತೆಯಾಗಿದೆ. ಅಂತೆಯೇ ವಿದ್ಯಾರ್ಥಿ, ಯುವಕರನ್ನೇ ಗುರಿಯಾಗಿಸಿಕೊಂಡು ಈ ದಂಧೆ ನಡೆಯುತ್ತಿದೆ.

ಈ ನಿಟ್ಟಿನಲ್ಲಿ ಆಯುಕ್ತರಾದ ಡಾ. ಪಿ ಎಸ್ ಹರ್ಷ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾದಕ ವಸುಗಳಿಗೆ ಕಡಿವಾಣ ಹಾಕುವ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಮಂಗಳೂರು ಎಸ್.ಪಿ ಲಕ್ಷ್ಮೀ ಪ್ರಸಾದ್, ಶಾಸಕ ಯು ಟಿ ಖಾದರ್ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*