ದೆಹಲಿಯತ್ತ ಪ್ರಯಾಣ ಬೆಳೆಸಿದ ಅನರ್ಹ ಶಾಸಕರು; ನಾಳೆ ಇತ್ಯರ್ಥವಾಗುತ್ತಾ ಪ್ರಕರಣ.? – ಎನ್.ಎಂ.ಸಿ ನ್ಯೂಸ್

15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಕೂಡ ಆರಂಭವಾಗಿದೆ. ಆದರೆ, ಅನರ್ಹರ ಶಾಸಕರ ಅನರ್ಹತೆ ವಿಚಾರ ಸುಪ್ರೀಂ ಕೋರ್ಟ್ ನಿಂದ ಹೊರ ಬೀಳದಿರುವ ಹಿನ್ನೆಲೆಯಲ್ಲಿ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದರೂ ಅನರ್ಹರು ನಾಮಪತ್ರ ಸಲ್ಲಿಸದಂತಾಗಿದೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿದೆ. ನಾಳೆ ತೀರ್ಪು ಬರುವ ನಿರೀಕ್ಷೆಯಿದ್ದು, ರಾಜ್ಯ ರಾಜಕಾರಣದ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಈಗಾಗಲೇ ಅನರ್ಹ ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

Be the first to comment

Leave a Reply

Your email address will not be published.


*