ಅನರ್ಹರಿಗೆ ಸಿಕ್ತು ರಿಲೀಫ್; ಮುಂದಿನ ನಡೆಯೇನು..? ನಳೀನ್ ಕುಮಾರ್ ಅವರ ಮುಂದಿನ ಗುರಿ ಯಾವುದು? – ಎನ್.ಎಂ.ಸಿ ನ್ಯೂಸ್

ರಾಜ್ಯದ ಹದಿನೇಳು ಶಾಸಕರ ಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು ಈ ತೀರ್ಪನ್ನು ಸ್ವಾಗತಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ತೀರ್ಪಿನಿಂದ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತಿದೆ. ಈಗಾಗಲೇ ಚುನಾವಣೆ ಸಹ ನಿಗದಿಯಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಾಗಿ ತಯಾರಿ ನಡೆಸಲು ನಿಶ್ಚಯ ಮಾಡಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅನರ್ಹರ ಶಾಸಕರ ಪಕ್ಷ ಸೇರ್ಪಡೆ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡಿ ನಂತರ ತೀರ್ಮಾನ ಕೈಗೊಳ್ಳಲಿದ್ದೇವೆ. ಎಲ್ಲಾ ವಿಷಯಗಳನ್ನು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

Be the first to comment

Leave a Reply

Your email address will not be published.


*