ಇಂದಿನಿಂದ ಡಿ. 13ರ ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ – ಎನ್.ಎಂ.ಸಿ ನ್ಯೂಸ್

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಈ ಸಂಸತ್ತು ಕಲಾಪ ನ. 18ರಿಂದ ಡಿ. 13ರ ವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ನಾಗರಿಕತ್ವವನ್ನು ಒದಗಿಸುವಂಥ ವಿವಾದಾತ್ಮಕ ಪೌರತ್ವ (ತಿದ್ದು ಪಡಿ) ಮಸೂದೆಯನ್ನು ಸಂಸತ್‍ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ, ಅಂಗೀಕಾರ ಪಡೆಯಲು ಕೇಂದ್ರ ಸರಕಾರ ಉದ್ದೇಶಿಸಿದೆ. ಅಂತೆಯೇ ಮಸೂದೆಯನ್ನು ಅಧಿವೇಶನದ ಅಜೆಂಡಾವಾಗಿ ಸರಕಾರ ಪಟ್ಟಿ ಮಾಡಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರವು ಹಿಂದಿನ ಅವಧಿಯಲ್ಲೇ ಈ ಮಸೂದೆಗೆ ಅಂಗೀಕಾರ ಪಡೆಯಲು ಪ್ರಯತ್ನಿಸಿತ್ತಾದರೂ ವಿಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅದು ವಿಫಲವಾಗಿತ್ತು. ಈ ಮಸೂದೆಯು ಧಾರ್ಮಿಕ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿದ್ದ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

ಚಳಿಗಾಲದ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳೂ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ. ಎಲ್ಲ ಪಕ್ಷಗಳೂ ಸಾರ್ವ ಜನಿಕರ ಹಿತಾಸಕ್ತಿಯಿರುವ ವಿಚಾರಗಳ ಕುರಿತು ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಮೋದಿ ಅವರೂ ಭಾಗಿಯಾಗಿದ್ದರು.

Be the first to comment

Leave a Reply

Your email address will not be published.


*