ಕುತೂಹಲದ ಕೇಂದ್ರವಾದ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ – ಎನ್.ಎಂ.ಸಿ ನ್ಯೂಸ್

ರಾಜ್ಯದಲ್ಲಿ ಉಪಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದ್ದು ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಹಾಗಾಗಿ ಅಭ್ಯರ್ಥಿಗಳು ತಮ್ಮ ತಮ್ಮ ಮುಖಂಡರೊಂದಿಗೆ, ಕಾರ್ಯಕರ್ತರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಗೋಕಾಕ್ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ಮಾಡಿರೋ ಕಾರ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಲಖನ್ ಜಾರಕಿಹೊಳಿ ಜೊತೆ ಸಹೋದರ ಸತೀಶ್ ಜಾರಕಿಹೊಳಿ ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೌದು, ಲಖನ್ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಲಖನ್ ಜೊತೆ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿರುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ. ನೀವ್ಯಾಕೆ ನಾಮಪತ್ರ ಸಲ್ಲಿಕೆ ಮಾಡಿದ್ದೀರಾ ಎಂದು ಕೇಳಿದ್ದಕ್ಕೆ ಸತೀಶ್ ಜಾರಕಿಹೊಳಿ ನೀಡಿದ ಉತ್ತರ, ನಾನು ಬೆಂಬಲಕ್ಕೋಸ್ಕರ ನಾಮಪತ್ರ ನೀಡಿದ್ದೇನೆ. ಇದು ಡಮ್ಮಿ ನಾಮಪತ್ರ. ಈ ರೀತಿ ಎಲ್ಲಾ ಕಡೆ ಮಾಡುತ್ತಾರೆ. ಈಗಾಗಲೇ ಲಖನ್ ಗೆ ಬಿ ಫಾರಂ ಸಿಕ್ಕಿದೆ ಎಂದು ಹೇಳಿದ್ದಾರೆ.

Be the first to comment

Leave a Reply

Your email address will not be published.


*