ಅನರ್ಹರಿಗೆ ಮತ ಕೇಳುವ ಅರ್ಹತೆಯಾಗಲೀ, ಯೋಗ್ಯತೆಯಾಗಲಿ ಇಲ್ಲ; ಮಾಜಿ ಸ್ಪೀಕರ್ ರಮೇಶ್ ಕುಮಾರ್ – ಎನ್.ಎಂ.ಸಿ ನ್ಯೂಸ್

ಹಾವೇರಿ: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿರುವ ಅನರ್ಹ ಬಿಜೆಪಿ ಅಭ್ಯರ್ಥಿಗಳಿಗೆ ಮತ ಕೇಳುವ ಅರ್ಹತೆಯೇ ಇಲ್ಲ. ಈ ಉಪ ಚುನಾವಣೆಯಲ್ಲಿ ಅನರ್ಹ ಬಿಜೆಪಿ ಅಭ್ಯರ್ಥಿಗಳಿಗೂ, ಬಿಜೆಪಿ ಪಕ್ಷಕ್ಕೂ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಹಾವೇರಿಯ ರಾಣೆಬೆನ್ನೂರು ತಾಲೂಕಿನ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಳ ಉದ್ದೇಶಿಸಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, 17 ಶಾಸಕರು ರಾಜೀನಾಮೆ ನೀಡಿ ಮುಂಬೈನಲ್ಲಿ ಉಳಿದುಕೊಂಡಿದ್ದಾಗ ತನಗೂ, ಅತೃಪ್ತ ಶಾಸಕರಿಗೂ ಯಾವುದೇ ಸಂಬಂಧವಿಲ್ಲ ಎಂದು ಯಡಿಯೂರಪ್ಪ ಹೇಳುತ್ತಿದ್ದರು. ಈಗ ಅದೇ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದ್ದು, ಮಂತ್ರಿ ಕೂಡ ಮಾಡುತ್ತೇನೆ ಎಂದು ಹೇಳುತ್ತಿರುವುದಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ನಾನು ಸ್ಪೀಕರ್ ಆಗಿದ್ದಾಗ ನೀಡಿದ್ದ ರಾಜೀನಾಮೆ ಸಲ್ಲಿಸಿ ಹೊರ ನಡೆದಿದ್ದ ಶಾಸಕರನ್ನು ಅನರ್ಹ ಗೊಳಿಸಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇಂತಹ ಅನರ್ಹ ಶಾಸಕರಿಗೆ ಬಿಜೆಪಿ ಸಂಬಂಧವಿಲ್ಲ ಎಂದು ಹೇಳುತ್ತಲೇ ಇದೀಗ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಟಿಕೆಟ್ ನೀಡಿದೆ. ಈ ಬಗ್ಗೆ ನೀವು ಯೋಚಿಸಿ ಮತ ನೀಡಿ. ಅನರ್ಹರನ್ನು ದೂರವಿಡೋದು ಮರೆಯಬೇಡಿ ಎಂದು ತಿಳಿಸಿದರು.

Be the first to comment

Leave a Reply

Your email address will not be published.


*