ಅಂಗನವಾಡಿಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಪೋಟ – ಎನ್.ಎಂ.ಸಿ ನ್ಯೂಸ್

ಅಂಗನವಾಡಿಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡ ಘಟನೆ ವಿಜಯಪುರದ ಆಜ್ಹಾದ್ ನಗರದ ವಾರ್ಡ್ ನಂ.1ರಲ್ಲಿ ನಡೆದಿದೆ. ಅಂಗನವಾಡಿಯಲ್ಲಿದ್ದ 25ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂದಿನಂತೆ ಅಂಗನವಾಡಿಯಲ್ಲಿ ಮಕ್ಕಳಿಗಾಗಿ ಬಿಸಿಯೂಟ ತಯಾರಿಕೆಯಲ್ಲಿ ನಿರತರಾಗಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಲೀಕ್ ಆದ ಪರಿಣಾಮ, ಸಿಲಿಂಡರ್ ಸ್ಪೋಟಗೊಂಡಿದೆ.

ಹೀಗಾಗಿ ಅಂಗನವಾಡಿ ಚಿದ್ರವಾಗಿದೆ. ಸಿಲಿಂಡರ್ ಸ್ಪೋಟಗೊಂಡ ಕಾರಣದಿಂದಾಗಿ ಸ್ಥಳದಲ್ಲಿದ್ದ 25ಕ್ಕೂ ಹೆಚ್ಚು ಮಕ್ಕಳು ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳದಲ್ಲಿದ್ದ ಮಕ್ಕಳನ್ನು ಸುರಕ್ಷಿತವಾದಂತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಸಂಬಂಧ ವಿಜಯಪುರದ ಅಜ್ಹಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*