ಮಂಗಳೂರಿನಲ್ಲಿ ಡಿ.6ರಂದು ನಿರ್ಬಂಧಕಾಜ್ಞೆ ಜಾರಿ; ಡಾ. ಪಿ ಎಸ್ ಹರ್ಷ – ಎನ್.ಎಂ.ಸಿ ನ್ಯೂಸ್

ಮಂಗಳೂರು: ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 6ರಂದು ನಿರ್ಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್  ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯುದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧಕಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಾ.ಹರ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*