ಪಶುವೈದ್ಯೆಯ ಅತ್ಯಾಚಾರ, ಕೊಲೆ; ನಾಲ್ವರನ್ನು ಎನ್‍ಕೌಂಟರ್ ಮಾಡಿದ ಖಾಕಿ ಪಡೆ – ಎನ್.ಎಂ.ಸಿ ನ್ಯೂಸ್

ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಆರೋಪಿಗಳು ಇಂದು ಬೆಳಿಗ್ಗೆ ತಾವು ಘೋರ ಕೃತ್ಯ ನಡೆಸಿದ್ದ ಸ್ಥಳದಲ್ಲೇ ಪೆÇಲೀಸರಿಂದ ಎನ್ ಕೌಂಟರ್ ಆಗಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಆತ್ಮ ರಕ್ಷಣೆಗಾಗಿ ಪೊಲೀಸರು ಹಾರಿಸಿದ ಗುಂಡಿಗೆ ಆರೋಪಿಗಳು ಬಲಿಯಾಗಿದ್ದಾರೆ.

ಎನ್ ಕೌಂಟರ್ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆಯೇ ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು, ಆರೋಪಿಗಳಿಗೆ ತಕ್ಕ ಶಾಸ್ತಿಯಾಗಿದೆ ಎಂದು ಹೇಳುತ್ತಿದ್ದಾರೆ. ಆರೋಪಿಗಳು ಬಂಧನಕ್ಕೊಳಗಾದ ಸಂದರ್ಭದಲ್ಲೇ ಹೈದರಾಬಾದ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ಅವರುಗಳನ್ನು ನಮ್ಮ ವಶಕ್ಕೆ ನೀಡಿ ಎಂದು ಆಗ್ರಹಿಸಿದ್ದರು. ಅಲ್ಲದೇ ಈ ಪ್ರಕರಣದ ವಿಚಾರಣೆಯನ್ನು ಅತಿ ಶೀಘ್ರದಲ್ಲೇ ಪೂರ್ಣಗೊಳಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಸಾರ್ವಜನಿಕ ವಲಯದಲ್ಲೂ ಪ್ರಬಲ ಒತ್ತಾಯ ಕೇಳಿ ಬಂದಿತ್ತು.

 

 

Be the first to comment

Leave a Reply

Your email address will not be published.


*