ಡಿ.8ರಂದು ದಕ್ಷಿಣ ಕನ್ನಡಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ – ಎನ್.ಎಂ.ಸಿ ನ್ಯೂಸ್

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಿ.8ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ಡಿ.8ರಂದು ಮಧ್ಯಾಹ್ನ 1:45ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

2:25ಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭವನ್ನು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನೇರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Be the first to comment

Leave a Reply

Your email address will not be published.


*