ಉಡುಪಿ ಜಿಲ್ಲಾ ತೆನೆ ವಕ್ತಾರ ಪ್ರದೀಪ್ ಆತ್ಮಹತ್ಯೆ – ಎನ್.ಎಂ.ಸಿ ನ್ಯೂಸ್

ಉಡುಪಿ: ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾ ವಕ್ತಾರ ಪ್ರದೀಪ್ ಜಿ.(37) 76 ಬಡಗುಬೆಟ್ಟುವಿನ ಬೈಲೂರುನಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆರ್ಥಿಕ ಸಮಸ್ಯೆಯಿಂದ ಜ.2ರ ಸಂಜೆಯಿಂದ ಜ.3ರ ಬೆಳಗ್ಗೆ 10ಗಂಟೆಯ ಮಧ್ಯಾವಧಿಯಲ್ಲಿ ಇವರು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಚಿಕ್ಕಮಗಳೂರು ಕಡೂರು ಮೂಲದ ಗೋವಿಂದ ನಾಯ್ಕ ಎಂಬವರ ಪುತ್ರರಾಗಿರುವ ಇವರು, 2005ರಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ಯುವ ಜನತಾ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾನವ ಹಕ್ಕು ಘಟಕದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಪ್ರಸ್ತುತ ಉಡುಪಿಯ ಬಿರ್ತಿ ಕೋ ಅಪರೇಟಿವ್ ಸೊಸೈಟಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಉಡುಪಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ನಿಧನಕ್ಕೆ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್.ವಿ.ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

Be the first to comment

Leave a Reply

Your email address will not be published.


*