ಗೋಲಿಬಾರ್‍ನಲ್ಲಿ ಮೃತರಾದ ಕುಟುಂಬಗಳಿಗೆ ಸಾಂತ್ವನ ಹೇಳಿದ ರಿಜ್ವಾನ್ ಹರ್ಷಾದ್ – ಎನ್.ಎಂ.ಸಿ ನ್ಯೂಸ್

ಮಂಗಳೂರು ಗೋಲಿಬಾರಿನಲ್ಲಿ ಸಾವನ್ನಪ್ಪಿದ ಇಬ್ಬರ ಮನೆಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಹರ್ಷಾದ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇವರು ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದ ಬಳಿಕ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ. ಮಸೂದ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.

Be the first to comment

Leave a Reply

Your email address will not be published.


*