ಜೆಎನ್ ಯುನಲ್ಲಿ ಮಾರಾಮಾರಿ: ಭೀತಿಯನ್ನು ಹರಡುತ್ತಿರುವ ಮೋದಿ-ಶಾ ಗೂಂಡಾಗಳು; ಪ್ರಿಯಾಂಕ ಗಾಂಧಿ ವಾಗ್ದಾಳಿ -ಎನ್.ಎಂ.ಸಿ ನ್ಯೂಸ್

ನವದೆಹಲಿ: ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳ ಗುಂಪೆÇಂದು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದು, ಕ್ಯಾಂಪಸ್ ಆಸ್ತಿ ಪಾಸ್ತಿ ಹಾಳು ಮಾಡಿದ್ದಾರೆ. ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಹಿಂಸಾಚಾರದಲ್ಲಿ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಷೆ ಘೋಷ್ ಸೇರಿದಂತೆ ಸುಮಾರು 28 ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಪಕ್ಷಗಳು, ಬಾಲಿವುಡ್ ನಟ ನಟಿಯರು ಮತ್ತಿತರರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನ ಗೇಟ್ ವೇ ಮುಂಭಾಗ ನೆರೆದಿದ್ದ ಸಹಸ್ರಾರು ವಿದ್ಯಾರ್ಥಿಗಳು ಜೆಎನ್ ಯು ಹಿಂಸಾಚಾರ ಖಂಡಿಸಿ ಮಧ್ಯರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ , ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಕೆ ಮೌನವಹಿಸಿದ್ದಾರೆ ಎಂದು ಪ್ರಶ್ನಿಸಿದ್ದು, ಅವರಿಂದಲೇ ಈ ಗಲಾಟೆ ನಡೆದಿದೆ. ವಿಶ್ವವಿದ್ಯಾಲಯಗಳ ಮೂಲಕ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಗೂಂಡಾಗಳು ಭೀತಿಯನ್ನು ಹರಡುತ್ತಿದ್ದಾರೆ ಎಂದುಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

 

Be the first to comment

Leave a Reply

Your email address will not be published.


*