ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೆ ಬೇರೆ ವಸ್ತು ಮಾರಾಟ ಮಾಡುವಂತಿಲ್ಲ – ಎನ್.ಎಂ.ಸಿ ನ್ಯೂಸ್

ನ್ಯಾಯಬೆಲೆ ಅಂಗಡಿಗಳಲ್ಲಿ ಬೇರೆ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಬೇರೆ ವಸ್ತು ಸಾಮಗ್ರಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯಗಳ ಜೊತೆಗೆ ಬಲವಂತವಾಗಿ ಸೋಪು, ಮತ್ತಿತರ ವಸ್ತು ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಪ್ರತಿ ಪಡಿತರ ಚೀಟಿಗೆ 10 -20 ರೂಪಾಯಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಸಾಬೀತಾದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Be the first to comment

Leave a Reply

Your email address will not be published.


*