ಶ್ರೀ ರಾಮ ಭಜನಾ ಮಂದಿರ ಬ್ರಹ್ಮರಕೊಟ್ಲು ಇದರ 48ನೇ ವರ್ಷದ ಏಕಾಹ ಭಜನಾ ಮಹೋತ್ಸವ – ಎನ್.ಎಂ.ಸಿ ನ್ಯೂಸ್

ಶ್ರೀ ಮೂಕಾಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ ಬ್ರಹ್ಮರಕೊಟ್ಲು ಕಳ್ಳಿಗೆ ಇದರ 48ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಂಭ್ರಮದಿಂದ ನಡೆದಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಆಗಮಿಸಿ ದೇವರ ಆಶೀರ್ವಾದ ಪಡೆದು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶ್ರೀ ಗುರುದೇವತ್ತ ಸಂಸ್ಥಾನಂ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ವೈದ್ಯರಾದ ರಘುರಾಮ ಶೆಟ್ಟಿ ಗುಳ್ಳಾಡಿ, ಸಂತೋಷ್ ಕುಮಾರ್ ಉದ್ಯಮಿ ಬೆಂಗಳೂರು, ನಿವೃತ್ತಿ ಪ್ರಬಂಧಕರು ಪಿ ತಾಚಪ್ಪ ಪೂಜಾರಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

 

Be the first to comment

Leave a Reply

Your email address will not be published.


*